ಬಳ್ಳಾರಿ,ಜ.26: ಸಂವಿಧಾನದ ಆಶಯದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ಬದ್ದವಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಹೇಳಿದರು.
73ನೇ ಗಣರಾಜ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಬುಧವಾರ ಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಬಿ.ಶ್ರೀರಾಮುಲು ಅವರು ಗಣರಾಜ್ಯೋತ್ಸವ ಸಂದೇಶ ನೀಡಿದರು.
ಇಂದಿನ ಧ್ವಜಾರೋಹಣದೊಂದಿಗೆ ನವ ಬಳ್ಳಾರಿ ನಿರ್ಮಾಣದ, ಅಭಿವೃದ್ಧಿಯ ಹೊಸ ಶಖೆ ಆರಂಭ ಆಗಿದೆ ಎಂದು ತಮ್ಮ ಮಾತುಗಳಲ್ಲಿ ಸ್ಪಷ್ಟಪಡಿಸಿದ ಸಚಿವ ಬಿ.ಶ್ರೀರಾಮುಲು ಅವರು ಕೃಷಿ, ಗಣಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳು ನಮ್ಮ ಜಿಲ್ಲೆಯ ಶಕ್ತಿಯಾಗಿವೆ.ಜಗತ್ತಿನ ಶ್ರೇಷ್ಠ ದರ್ಜೆಯ ಕಬ್ಬಿಣ ಮತ್ತು ಉಕ್ಕಿನ ಕನಿಜ ಬಳ್ಳಾರಿ ಜಿಲ್ಲೆಯಲ್ಲಿ ಇದೆ ಎಂದರು.
2021-22 ಸಾಲಿನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ಬಳ್ಳಾರಿ ಜಿಲ್ಲೆಯ 86,490 ರೈತರಿಗೆ 10ನೇ ಕಂತಿನ ವರೆಗೆ ಒಟ್ಟು 13,736 ಲಕ್ಷ ರೂ.ವರ್ಗಾವಣೆಯಾಗಿದ್ದು, ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಸುರಿದ ಬಾರಿ ಮಳೆಯಿಂದ ರೈತರಿಗೆ ಆದ ನಷ್ಟದ ಹಿನ್ನೆಲೆಯಲ್ಲಿ 53,065 ರೈತರಿಗೆ 4,936 ಲಕ್ಷಗಳ ಬೆಳೆ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.