ಬೆಂಗಳೂರು: ರಾಜ್ಯದ ಸಿಎಂ ಆಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನತೆಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದರಿಂದ 25 ಲಕ್ಷಕ್ಕಿಂತ ಅಧಿಕ ಕುಟುಂಬಗಳಿಗೆ ಸಹಕಾರಿಯಾಗಲಿದ್ದು, ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡುವುದರಿಂದ ಸರ್ಕಾರಕ್ಕೆ ವಾರ್ಷಿಕ 700 ಕೋಟಿ ರೂ ಹೊರೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಅಷ್ಟೇ ಅಲ್ಲ, 100 SC/ST ಹಾಸ್ಟೆಲ್, 50 OBC ಹಾಸ್ಟೆಲ್ ಸ್ಥಾಪಿಸಲಾಗುವುದು ಎಂದು ಹೇಳಿದ್ದು, 5 ನಗರ(ಬೆಂಗಳೂರು, ಮೈಸೂರು, ಗುಲಬರ್ಗಾ, ಹು-ಧಾ, ಮಂಗಳೂರು) ಗಳಲ್ಲಿ 1000 ವಿದ್ಯಾರ್ಥಿಗಳಿಗೆ ಮೆಗಾ ಹಾಸ್ಟೆಲ್ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ,