ಬೆಂಗಳೂರು: ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ನೇಕಾರ, ಮೀನುಗಾರರು & ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿಯನ್ನು ನೀಡಲಾಗುತ್ತಿದೆ. ಇದುವರೆಗೆ ಈ ಯೋಜನೆಯಿಂದ 8.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು, ಪುಣ್ಯಕೋಟಿ ಕಾರ್ಯಕ್ರಮದ ಮೂಲಕ, ಹಸು ದತ್ತು ತೆಗೆದುಕೊಳ್ಳಲು ವೆಬ್‌ಸೈಟ್ ಅನ್ನು ಇವತ್ತು ಲೋಕಾರ್ಪಣೆ ಮಾಡಲಾಗುವುದು. 11 ಸಾವಿರ ರೂ ಪಾವತಿಸುವ ಮೂಲಕ ಗೋಶಾಲೆಯ ಹಸುಗಳ ಪೋಷಣೆಗೆ ನೆರವಾಗಬಹುದು. ಇಲ್ಲವೇ ಅವರೇ ದತ್ತು ತೆಗೆದುಕೊಳ್ಳಬಹುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.