ಬೆಂಗಳೂರು : ಶೀಘ್ರದಲ್ಲಿ 8000 ಉಪನ್ಯಾಸಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್ ಅಶ್ವತ್ ನಾರಾಯಣ ಅವರು ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಡಿಸಿಎಂ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು, 1200 ಸಹಾಯಕ ಪ್ರಾಧ್ಯಾಪಕರು, 330 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಆರ್ಥಿಕ ಇಲಾಖೆ ಜೊತೆಗೆ ಮಾತನಾಡಿದ್ದು, ಶೀಘ್ರದಲ್ಲಿ ಈ ಬಗ್ಗೆ ಅನುಮತಿ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಇನ್ನು ಉಪನ್ಯಾಸಕರನ್ನು ನೇಮಕ ಮಾಡುವುದಕ್ಕೆ ಆರ್ಥಿಕ ಸಹಾಯಕ್ಕಾಗಿ ಬಜೆಟ್‌ನಲ್ಲಿ ಹೆಚ್ಚಿನ ಹಣವನ್ನು ಮೀಸಲು ಇಡಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಡಿಸಿಎಂ ಡಾ.ಸಿ.ಎನ್ ಅಶ್ವತ್ ನಾರಾಯಣ ಅವರು ಹೇಳಿದ್ದಾರೆ.