ರಾಜ್ಯದಲ್ಲಿನ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 2750.55 ಕೋಟಿ ರುಪಾಯಿ ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ.
ಇದು ಪ್ರಮುಖವಾಗಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಯೋಜನೆಗಳು ರೂಪಗೊಂಡಿದ್ದು, ಕೈಗಾರಿಕಾ ಸಚಿವ ಡಾ.ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತಗೆದುಕೊಂಡಿದೆ.
ಇನ್ನು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 2750.55 ಕೋಟಿ ರುಪಾಯಿ ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ರಾಜ್ಯದಲ್ಲಿ 8619 ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯಿದೆ.