ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ ಬರೋಬ್ಬರಿ 2.69 ಕೋಟಿ ರೂ ವರ್ಗಾವಣೆ ಮಾಡಿ ಎಸ್ಕೇಪ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.
ಹೌದು, ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ದಾಖಲಿಸಿದ್ದು, ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತನ್ನ ಹೆಂಡತಿಯ ಖಾತೆಗೆ ವರ್ಗಾವಣೆ ಮಾಡಿದ್ದು, ಪ್ರಸ್ತುತ ಆತ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.