ಮೊದಲ ಹೆಂಡತಿಯಿದ್ದು, ಮೂವರು ಮಕ್ಕಳ ತಂದೆಯಾಗಿರುವ ವ್ಯಕ್ತಿಯೋರ್ವ 16 ವರ್ಷ 11 ತಿಂಗಳ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಮೊದಲ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಹೌದು, ಅಪ್ರಾಪ್ತ ಬಾಲಕಿಗೆ ತಾಳಿ ಕಟ್ಟಿದ ಗಂಡನ ವಿರುದ್ದ ಇದೀಗ ಮೊದಲ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳಲ್ಲದೇ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಹುಬ್ಬಳ್ಳಿ – ಧಾರವಾಡ ಶಹರ ಅಂಗನವಾಡಿ ಮೇಲ್ವಿಚಾರಕಿ ಸವಿತಾ ಬದ್ದಿ ಅವರು, ತಮಗೆ ಬಂದ ದೂರಿನನ್ವಯ ಅಶೋಕ ನಗರ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹನಮಂತ ಉಪ್ಪಾರ ಅವರು ಈ ಪ್ರಕಾರಣದ ಆರೋಪಿಯಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಹಣದಾಸೆ ತೋರಿಸಿ ಅಪ್ರಾಪ್ತ ಬಾಲಕಿಯನ್ನು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಇಡಕಲ್ ಪಡೆಪ್ಪನ ದೇವಸ್ಥಾನದಲ್ಲಿ ಜನವರಿ 18, 2023 ರಂದು ಮದುವೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮೊದಲ ಪತ್ನಿ ನೇತ್ರಾ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಾಗುತ್ತಿದ್ದಂತೆ ಆತ ನಾಪತ್ತೆಯಾಗಿದ್ದಾನೆ.