ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು

ರಾಯಚೂರು: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ದುರ್ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಬೋಗಾಪುರ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಬಸವರಾಜು(25), ಪಲ್ಲವಿ(23)…

Road accident vijayaprabha

ರಾಯಚೂರು: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ದುರ್ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಬೋಗಾಪುರ ಕ್ರಾಸ್ ಬಳಿ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಬಸವರಾಜು(25), ಪಲ್ಲವಿ(23) ಮತ್ತು 2 ವರ್ಷದ ಮಗು ಶರತ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಮೃತರು ಬೈಕ್ ನಲ್ಲಿ ಗುಂತಗೋಳ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ.

ಇನ್ನು, ಈ ಅಪಘಾತ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.