ಹಾಲು, ಮೊಸರು, ತುಪ್ಪ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬೆನ್ನಲ್ಲೇ ಹೊಟೇಲ್ ಗ್ರಾಹಕರಿಗೆ ದರ ಏರಿಕೆಯ ಶಾಕ್ ಎದುರಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ ಮಾಡಲಾಗಿದೆ.
ರಾಜ್ಯದ ಬಹುತೇಕ ಹೊಟೇಲ್‌ಗಳು ಸದ್ದಿಲ್ಲದೆ ಊಟ, ತಿಂಡಿ ದರವನ್ನು 15%-20%ನಷ್ಟು ಹೆಚ್ಚು ಮಾಡಿವೆ. ಕಾಫಿ, ಟೀ ಬೆಲೆಯಲ್ಲೂ ಏರಿಕೆ ಮಾಡಲಾಗಿದ್ದು, ಹೊಸ ದರಪಟ್ಟಿಯನ್ನು ಹೊಟೇಲ್‌ಗಳ ಮುಂದೆ ಅಳವಡಿಸಲಾಗಿದೆ. ರೈಸ್ ಬಾತ್ ಬೆಲೆ 30-40 ರೂ. ಆಸುಪಾಸಿನಲ್ಲಿದ್ದರೆ, ದೋಸೆ ಬೆಲೆ 10 ರೂಪಾಯಿಗಳಷ್ಟು ಹೆಚ್ಚಾಗಿದೆ. ಕಾಫಿ-ಟೀ ಬೆಲೆಯನ್ನು 15ರೂ ಗೆ ಹೆಚ್ಚಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.