ವಿಶಾಖಪಟ್ಟಣ: ವ್ಯಕ್ತಿಯೊಬ್ಬರು ತನ್ನ ಪತ್ನಿಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಸಾಗಿದ ಹೃದಯವಿದ್ರಾವಕ ಘಟನೆ ಆಂಧ್ರ ಪ್ರದೇಶ ರಾಜ್ಯದ ವಿಶಾಖಪಟ್ಟಣದಲ್ಲಿ ನಡೆದಿದೆ.
ಹೌದು, ಒಡಿಶಾದ ಮೂಲದ ವ್ಯಕ್ತಿ ತನ್ನ ಅನಾರೋಗ್ಯ ಪೀಡಿದ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ವಾಪಾಸ್ ಬರುವಾಗ ಮಹಿಳೆ ಆಟೋದಲ್ಲೇ ಕೊನೆಯುಸಿರೆಳೆದಿದ್ದಾಳೆ. ಈ ವೇಳೆ ಆಟೋ ಚಾಲಕ ಪತ್ನಿಯ ಮೃತದೇಹದೊಂದಿಗೆ ಆ ವ್ಯಕ್ತಿಯನ್ನು ಅರ್ಧ ದಾರಿಯಲ್ಲೇ ಇಳಿಸಿ ಹೋಗಿದ್ದಾನೆ.
ಹಾಗಾಗಿ, ಬೇರೆ ದಾರಿ ಕಾಣದೆ ಆ ವ್ಯಕ್ತಿ ತನ್ನ ಪತ್ನಿಯ ಮೃತದೇಹವನ್ನು ಭುಜದ ಮೇಲೆ ಹೊತ್ತು ಸಾಗಿದ್ದಾರೆ. ಇದನ್ನು ಕಂಡ ಸ್ಥಳೀಯ ಪೊಲೀಸರು ಆಂಬುಲೆನ್ಸ್ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.