ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ನಿಂತಿದ್ದ ಇಟಾಚಿಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನ್ನಪ್ಪಿರುವ ಘಟನೆ ಚಿತ್ರದುರ್ಗದ ಹತ್ತಿರ ನಡೆದಿದೆ.
ಹೌದು ಕಾಮಗಾರಿ ಹಿನ್ನಲೆ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಇಟಾಚಿಗೆ ಕಾರು ಬಂದು ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಕೆಂಚಪ್ಪ (40) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದ ಕೆಂಚಮಲ್ಲಪ್ಪನ ಬಾವಿ ಬಳಿ ನಡೆದಿದೆ.
ಇನ್ನು ಕಾರಿನಲ್ಲಿದ್ದ ಕೆಂಚಪ್ಪವರ ಹೆಂಡತಿ ತೀವ್ರವಾಗಿ ಗಾಯಗೊಂಡಿದ್ದು, ಚಿತ್ರದುರ್ಗದ ಸ್ಥಳೀಯ ಆಸ್ಪತ್ರೆಗೆ ಧಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಚಿತ್ರದುರ್ಗ ಸಿಟಿ ಠಾಣೆಯಲ್ಲಿ ಪ್ರಕರಣ ಧಾಖಲಿಸಲಾಗಿದೆ.