ಇಬ್ಬರು ಮಕ್ಕಳ ಕೊಂದು ತಾನು ನೇಣಿಗೆ ಶರಣಾದ ತಾಯಿ

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನಲ್ಲಿ ಘನಗೊರ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಮಕ್ಕಳ ಜೊತೆ ತಾಯಿ ಸಾವಿಗೆ ಶರಣಾದ ಘಟನೆ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ. ಹೌದು, ಸರೋಜ (32) ಮೃತ…

death vijayaprabha news

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನಲ್ಲಿ ಘನಗೊರ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಮಕ್ಕಳ ಜೊತೆ ತಾಯಿ ಸಾವಿಗೆ ಶರಣಾದ ಘಟನೆ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.

ಹೌದು, ಸರೋಜ (32) ಮೃತ ದುರ್ದೈವಿಯಾಗಿದ್ದು, ಇವರು ನರಸೀಪುರ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬುವವರ ಜೊತೆ ಮದುವೆ ಆಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ವಾಪಸ್​ ಆಗಿದ್ದರು.

ಮಾನಸಿಕ ಖಿನ್ನತೆಗೊಳಗಾಗಿದ್ದ ಮಹಿಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಕ್ಕಳನ್ನು ಕೊಂದು ತಾನೂ ಸಾವಿಗೆ ಶರಣಾಗಿದ್ದಾರೆ. ಈ ಘಟನೆ ಸಂಬಂಧ ಸ್ಥಳಕ್ಕೆ ಟಿ ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.