ಸರ್ಕಾರದಿಂದ ಮಹತ್ವದ ಘೋಷಣೆ; ಕೇಂದ್ರದಲ್ಲಿ ನೂತನ ‘ಸಹಕಾರ ಸಚಿವಾಲಯ’ ರಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಕೇಂದ್ರದಲ್ಲಿ ನೂತನ ‘ಸಹಕಾರ ಸಚಿವಾಲಯ’ ರಚಿಸಿ ಮಂಗಳವಾರ ಆದೇಶ ಹೊರಡಿಸಿದೆ. ಹೌದು, ಕೇಂದ್ರ ಸರ್ಕಾರ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಕೇಂದ್ರದಲ್ಲಿ ನೂತನ ‘ಸಹಕಾರ ಸಚಿವಾಲಯ’ ರಚಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಹೌದು, ಕೇಂದ್ರ ಸರ್ಕಾರ ನೂತನ ‘ಸಹಕಾರ ಸಚಿವಾಲಯ’ ರಚಿಸಿ ಆದೇಶ ಹೊರಡಿಸಿದ್ದು, ಈ ಸಚಿವಾಲಯವು ಸಹಕಾರಿ ಸಂಸ್ಥೆಗಳ ವ್ಯವಹಾರವನ್ನು ಸುಲಭಗೊಳಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸುವ ಕೆಲಸ ಮಾಡಲಿದೆ. ಅಲ್ಲದೆ, ಸಹಕಾರಿ ಆಂದೋಲನವನ್ನು ಬಲಪಡಿಸಲು ಪ್ರತ್ಯೇಕ ಆಡಳಿತ, ಕಾನೂನು, ನೀತಿ ಚೌಕಟ್ಟನ್ನು ಒದಗಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ವಿಸ್ತರಣೆ ಇಂದು ಸಂಜೆ 6ಕ್ಕೆ ನಡೆಯಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.