ಹಾವೇರಿಯಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಹಾವೇರಿ: ಇಂದು ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 2…

ಹಾವೇರಿ: ಇಂದು ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಹೇಳಿದರು.

Vijayaprabha Mobile App free

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.

ಇನ್ನು, ಈ ಕುರಿತು ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.