BREAKING: ಭೀಕರ ರಸ್ತೆ ಅಪಘಾತ; ಮಾಜಿ ಶಾಸಕರು ಸೇರಿದಂತೆ ನಾಲ್ವರಿಗೆ ಗಾಯ

ಚಾಮರಾಜನಗರ: ಚಾಮರಾಜನಗರದ ಬಾಣಳ್ಳಿ ಗೇಟ್ ಬಳಿ ನಿನ್ನೆ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ಮತ್ತು ಅವರ ಚಾಲಕ ಮೋಹನ್…

Road accident vijayaprabha

ಚಾಮರಾಜನಗರ: ಚಾಮರಾಜನಗರದ ಬಾಣಳ್ಳಿ ಗೇಟ್ ಬಳಿ ನಿನ್ನೆ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕೊಳ್ಳೇಗಾಲ ಮಾಜಿ ಶಾಸಕ ಎಸ್.ಬಾಲರಾಜು ಮತ್ತು ಅವರ ಚಾಲಕ ಮೋಹನ್ ಕಾಲಿಗೆ ಪೆಟ್ಟು ಬಿದ್ದಿದೆ. ಇವರ ಕಾರಿಗೆ ಢಿಕ್ಕಿ ಹೊಡೆದ ವಾಹನದ ಚಾಲಕ ಮತ್ತು ಕ್ಲೀನರ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು, ಅಪಘಾತ ಆದ ಸಮಯದಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿರುವ ಕಾರಣ ಮಾಜಿ ಶಾಸಕ ಬಾಲರಾಜು ಅಪಾಯದಿಂದ ಪಾರಾಗಿದ್ದು, ಸದ್ಯ ಮಾಜಿ ಶಾಸಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.