ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಅಕ್ಕ ತಮ್ಮ ಇಬ್ಬರು ದುರ್ಮರಣ ಹೊಂದಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಅಟ್ಟೂರು ಗ್ರಾಮದ ಬಳಿ ನಡೆದಿದೆ.
ಮೃತರನ್ನು ಬೆಂಗಳೂರಿನ ಶಾಜಿಯಾ ಭಾನು (26) ಇಬ್ರಾಹಿಂ ಸಾಬ್ (16) ಎಂದು ಗುರುತಿಸಲಾಗಿದ್ದು, ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಒಂದೇ ಕುಟುಂಬದ 9 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರು ಡಿಕ್ಕಿಯಾಗ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.