ದೇವದತ್ ಪಡಿಕ್ಕಲ್, ಎಬಿಡಿ ವಿಲಿಯರ್ಸ್ ಅರ್ಧ ಶತಕ; ಆರ್ ಸಿ ಬಿಗೆ 10 ರನ್ ಗಳ ರೋಚಕ ಜಯ!

ದುಬೈ : ಐಪಿಎಲ್ 13ನೇ ಆವೃತ್ತಿಯ 3ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡದ  ವಿರುದ್ಧ 10 ರನ್ ಗಳ ರೋಚಕ ಜಯ ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.…

ದುಬೈ : ಐಪಿಎಲ್ 13ನೇ ಆವೃತ್ತಿಯ 3ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡದ  ವಿರುದ್ಧ 10 ರನ್ ಗಳ ರೋಚಕ ಜಯ ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

164 ರನ್ ಗಳ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದ್ರಾಬಾದ್, ಬೇರ್ಸ್ಟೊ 61 & ಮನೀಷ್ ಪಾಂಡೆ 34 ಬ್ಯಾಟಿಂಗ್ ನೆರವಿನಿಂದ 19.4 ಓವರ್ ಗಳಲ್ಲಿ 153 ರನ್ ಗಳಿಸುವಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು  ಸೋಲಿಗೆ ಶರಣಾಯತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ  ಚಹಲ್ 3,  ಸೈನಿ 2 ಮತ್ತು  ಶಿವಂ ದುಬೆ 2 ವಿಕೆಟ್ ಪಡೆದು ಆರ್ ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇದಕ್ಕೂ ಮುಂಚೆ  ಟಾಸ್ ಸೋತು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕರ್ನಾಟಕ ರಣಜಿ ಪ್ರತಿಭೆ ದೇವದತ್ ಪಡಿಕ್ಕಲ್ ಅವರ ಚೊಚ್ಚಲ ಅರ್ಧ ಶತಕ (56 ರನ್ ),  ಅರೋನ್ ಫಿಂಚ್ (29) ಮತ್ತು ಮಿಸ್ಟರ್ 360 ಎಬಿಡಿ ವಿಲಿಯರ್ಸ್ (51) ಅವರ ಸಹಾಯದಿಂದ ಆರ್ ಸಿಬಿ ನಿಗದಿತ 20 ವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತು. ಸನ್ ರೈಸರ್ಸ್ ಹೈದ್ರಾಬಾದ್ ತಂಡದ ಪರ ವಿಜಯ್ ಶಂಕರ್, ಅಭಿಷೇಕ್ ಶರ್ಮಾ ಮತ್ತು ಟಿ ನಟರಾಜನ್ ತಲಾ ಒಂದು ವಿಕೆಟ್ ಪಡೆದರು.

Vijayaprabha Mobile App free

ಆರ್ ಸಿಬಿ ತಂಡ ತನ್ನ ಮುಂದಿನ ಪಂದ್ಯವನ್ನು ಸೆಪ್ಟೆಂಬರ್ 24 ರಂದು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಆಡಲಿದೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.