ಕೂಡ್ಲಿಗಿ: ಚಲಿಸುತ್ತಿದ್ದ ಸಾರಿಗೆ ಬಸ್ ಟೈರ್ ಬ್ಲಾಸ್ಟ್ ಆದ ಪರಿಣಾಮ, ನಿಯಂತ್ರಣ ತಪ್ಪಿದ ಬಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರೆ ಕ್ರಾಸ್ ಬಳಿ ನಡೆದಿದೆ.
ಹೌದು, ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿ ಸೇರಿ ಮೂವರು ಮೃತಪಟ್ಟಿದ್ದು, ಪದವಿ ವಿದ್ಯಾರ್ಥಿ ಪುಷ್ಪಲತಾ (20), ಮೀನಾಕ್ಷಿ (38) ಮೃತ ದುರ್ದೈವಿಗಳಾಗಿದ್ದು, ಆಸ್ಪತ್ರೆ ಸಾಗಿಸೋ ಮಾರ್ಗ ಮಧ್ಯೆ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ.
ಇನ್ನು, ಈ ಭೀಕರ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ವಿಮ್ಸ್ ಗೆ ರವಾನೆ ಮಾಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.