ವಿಜಯನಗರ : ಕೈಯಲ್ಲಿ ಚಪ್ಪಲಿ ಹಿಡಿದು ಹಾಲಿ ಶಾಸಕನೋರ್ವನ ಹಲ್ಲೆಗೆ ಮುಂದಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಹೌದು, ಪುರಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಹಾಲಿ ಶಾಸಕ ಭೀಮಾನಾಯ್ಕ್ ಮತ್ತು ಮಾಜಿ ಶಾಸಕ ನೇಮಿರಾಜ್ ನಾಯ್ಕ್ ನಡುವೆ ಈ ಗಲಾಟೆ ನಡೆದಿದ್ದು, ಹಗರಿಬೊಮ್ಮನಹಳ್ಳಿಯ ಹಾಲಿ ಶಾಸಕ ಭೀಮಾನಾಯ್ಕ್ ಚಪ್ಪಲಿ ಹಿಡಿದುಕೊಂಡು ಅವಾಚ್ಯ ಶಬ್ದಗಳಿಂದ ಹಲ್ಲೆಗೆ ಮುಂದಾಗಿರುವ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.
ಇನ್ನು, ಶಾಸಕ ಭೀಮಾನಾಯ್ಕ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.