ನವದೆಹಲಿ: ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ರಲ್ಲಿ ಆಧಾರ್ ಮಾಹಿತಿ ಮೂಲಕ ನೋಂದಣಿ ಕಾಯ್ದೆಗೆ ಅವಕಾಶ ಇಲ್ಲ ಎಂದು ಇತ್ತೀಚೆಗೆ ಆದೇಶ ಹೊರಡಿಸಿದ್ದು, ಜನನ ಮತ್ತು ಮರಣ ನೋಂದಣಿಗೆ ಆಧಾರ್ ಸಂಖ್ಯೆ ಬೇಕಾಗಿಲ್ಲ ಎಂದು ಭಾರತದ ರಿಜಿಸ್ಟ್ರಾರ್ ಜನರಲ್ ಆದೇಶ ನೀಡಿದ್ದಾರೆ.
ಇನ್ನು, ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಜನನ ಮತ್ತು ನೋಂದಣಾಧಿಕಾರಿಗಳು ಜನನ ಮತ್ತು ಮರಣ ನೋಂದಣಿ ಮಾಡುವ ಸಂದರ್ಭದಲ್ಲಿ ಆಧಾರ್ ಕಡ್ಡಾಯ ಎಂದು ಜನರಿಗೆ ಸೂಚಿಸಬಾರದು ಎಂದು ಸೂಚಿಸಿದ್ದು, ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ಜನನ ಮತ್ತು ಮರಣ ನೋಂದಣಿಗೆ ಆಧಾರ್ ಬಳಕೆ ಮಾಡುತ್ತಿವೆ ಎಂದು ರಿಜಿಸ್ಟ್ರಾರ್ ಜನರಲ್ ತಿಳಿಸಿದ್ದಾರೆ.
ಆದರೆ, ರಾಜ್ಯ ಸರಕಾರಗಳು ಹೇಳುವುದೇನೆಂದರೆ 2017ರ ಆಗಸ್ಟ್‌ನಲ್ಲಿ ಬಂದ ನಿರ್ದೇಶನದ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳ ಪ್ರಕಾರ ಅಸುನೀಗಿದ ವ್ಯಕ್ತಿ ಆಧಾರ್ ಕಾರ್ಡ್ ಹೊಂದಿಲ್ಲ ಎಂಬುದಕ್ಕೆ ಆತನ ಕುಟುಂಬಸ್ಥರು ಪ್ರಮಾಣ ಪತ್ರ ಸಲ್ಲಿಸಬೇಕಾಗಿದ್ದು, 2016ರ ಆಧಾರ್ ಕಾಯ್ದೆಯ ಸೆಕ್ಷನ್ 57ರ ಪ್ರಕಾರ ಕಾನೂನು ಪ್ರಕಾರವಾಗಿರುವ ಯಾವುದೇ ವ್ಯವಸ್ಥೆ ಮತ್ತು ಒಪ್ಪಂದವನ್ನು 12 ಅಂಕೆಗಳ ಮೂಲಕ ಖಚಿತಪಡಿಸಿಕೊಳ್ಳಲಾಗುತ್ತದೆ.




