ನವದೆಹಲಿ: ಕೊರೋನಾ ಸೋಂಕಿನಿಂದ ದೂರವಿರಲು ಪ್ರತಿಯೊಬ್ಬರು ಕರೋನ ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದು, ಕೋವಿಡ್ ಲಸಿಕೆಗಾಗಿ ಕೋವಿನ್ ಪೋರ್ಟಲ್‍ನಲ್ಲಿ ನೋಂದಣಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‍ಗೆ ತಿಳಿಸಿದೆ.
ಹೌದು, ಈ ಕುರಿತು ಪುಣೆ ಮೂಲದ ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ್ ಶಂಕರ್ ಶರ್ಮಾ ಸಾರ್ವಜನಿಕ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಿದ್ದು, ಕೊರೋನಾ ಲಸಿಕೆಯನ್ನು ನೀಡುವ ಉದ್ದೇಶಕ್ಕಾಗಿ ಆಧಾರ್ ಕಾರ್ಡ್ ನೀಡಲು ಕೇಳಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು.
ಇದರ ವಿಚಾರವಾಗಿ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ ಕೋರಿದ ನ್ಯಾಯಾಲಯಕ್ಕೆ, ಕರೋನ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಾಲ್ಲ ಎಂದು ಕೇಂದ್ರ ಹೇಳಿದೆ. ಇನ್ನು, ದೇಶದಲ್ಲಿ ಕರೋನ ಸೋಂಕಿಗೆ ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಲಸಿಕೆಗಳನ್ನು ಬಳಸಲಾಗುತ್ತಿದೆ.