ಈಗಾಗಲೇ ರೇಷನ್ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಹಾಗು ಬ್ಯಾಂಕ್ ಖಾತೆಗಳಂತಹ ಹಲವು ದಾಖಲೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲಾಗಿದೆ. ಈಗ ಭೂವಿವಾದಗಳು ಮತ್ತು ವಂಚನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಭೂ-ಸಂಬಂಧಿತ ದಾಖಲೆಗಳನ್ನು ಆಧಾರ್‌ನೊಂದಿಗೆ ಜೋಡಿಸಲು ಸಿದ್ಧತೆ ನಡೆಸಿದೆ.
ಹೌದು, ಡಿಜಿಟಲ್ ಇಂಡಿಯಾ ಅಭಿಯಾನದಡಿಯಲ್ಲಿ 2023-24ರ ವೇಳೆಗೆ ಭೂ ದಾಖಲೆಗಳನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಿಸಲಾಗುತ್ತದೆ. ರಾಷ್ಟ್ರೀಯ ಸಾಮಾನ್ಯ ದಾಖಲೆ ನೋಂದಣಿ ವ್ಯವಸ್ಥೆಯಡಿ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಜಾರಿಗೆ ತರಲಾಗುತ್ತಿದ್ದು, ಇದರಿಂದಾಗಿ ಭೂ ದಾಖಲೆಗಳನ್ನು ಒಂದೇ ಸ್ಥಳದಲ್ಲಿ ಡಿಜಿಟಲ್ ರೂಪದಲ್ಲಿ ಸಂರಕ್ಷಿಸಬಹುದಾಗಿರುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.