Accident : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಈ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಹೌದು, ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ನಡೆದಿದ್ದು, ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರತಾಲೂಕು ಸಂಗಬಸವನದೊಡ್ಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: Mosquito bites | ಸೊಳ್ಳೆ ಕಡಿತದಿಂದ ಪಾರಾಗಲು ಇಲ್ಲಿದೆ ಮನೆಮದ್ದು
ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬಂದು ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಕಾರು ನುಜ್ಜುಗುಜ್ಜಾಗಿದ್ದು, ದಂಪತಿ ಮತ್ತು ಚಾಲಕ ಮೃತಪಟ್ಟಿದ್ದಾರೆ.
ಇನ್ನು, ಮೃತ ಮೂವರ ಕುರಿತಂತೆ ಇದುವರೆಗೂ ಮಾಹಿತಿ ತಿಳಿದು ಬಂದಿಲ್ಲ. ಅಪಘಾತದ ಕುರಿತಂತೆ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Panchanga | ಇಂದು ಬುಧವಾರ 27-11-2024; ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!