ಜಗಳೂರು: ತಾಲ್ಲೂಕಿನ ಹೊಸಕೇರೆ ಗ್ರಾಮದ ಸರ್ಕಾರಿ ಹಿರಿಯ ಪ್ರಥಮ ಶಾಲೆಯ ಬಳಿ ಲಾರಿ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಚಾಲಕ ಹನುಮಂತಪ್ಪ (38), ಹಾಲಪ್ಪ (60) ಮೃತ ದುರ್ದೈವಿಗಳಾಗಿದ್ದು, ಮೃತ ಹಾಲಪ್ಪ ನ ಮಗಳು ಹಾಗೂ ಮೊಮ್ಮಗಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಗಳೂರು ಕಡೆಯಿಂದ ಕೊಟ್ಟರೂ ಕಡೆಗೆ ಹೊಗುತಿದ್ದ ಲಾರಿ ಚಿಕ್ಕ ಉಜ್ಜನಿಯಿಂದ ಜಗಳೂರು ಕಡೆಗೆ ಬರುತಿದ್ದ ಓಮಿನಿ ವಾಹದ ನಡುವೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಈ ಘಟನೆ ಸಂಭಂದ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.