ಕರೋನ ಮುಕ್ತ ದೇಶವೆಂದು ಹೆಮ್ಮೆಯಿಂದ ಹೇಳಿಕೊಳ್ಳುವ ಕ್ಷಣ ಬರುತ್ತೆ ; ಕರೋನ ಲಸಿಕೆ ಬಗ್ಗೆ ಬಿಗ್ ಬಿ ರಿಯಾಕ್ಷನ್

ಮುಂಬೈ: ಕರೋನಾ ಸಾಂಕ್ರಾಮಿಕವು ಕಳೆದ ಒಂದು ವರ್ಷದಿಂದ ವಿಶ್ವದಾದ್ಯಂತ ಉಲ್ಬಣಗೊಳ್ಳುತ್ತಿದೆ. ಕರೋನ ಕಾರಣದಿಂದ ಸರ್ಕಾರಗಳು ಲಾಕ್ ಡೌನ್ ಹೇರಿದ್ದರಿಂದ ಆರ್ಥಿಕವಾಗಿ ಬಡ ಜನರು ಅನುಭವಿಸುವ ಕಷ್ಟಗಳು ಅಷ್ಟಿಷ್ಟಲ್ಲ. ಈ ಪರಿಣಾಮದಿಂದ ಅನೇಕ ದೇಶಗಳು ಆರ್ಥಿಕ…

ಮುಂಬೈ: ಕರೋನಾ ಸಾಂಕ್ರಾಮಿಕವು ಕಳೆದ ಒಂದು ವರ್ಷದಿಂದ ವಿಶ್ವದಾದ್ಯಂತ ಉಲ್ಬಣಗೊಳ್ಳುತ್ತಿದೆ. ಕರೋನ ಕಾರಣದಿಂದ ಸರ್ಕಾರಗಳು ಲಾಕ್ ಡೌನ್ ಹೇರಿದ್ದರಿಂದ ಆರ್ಥಿಕವಾಗಿ ಬಡ ಜನರು ಅನುಭವಿಸುವ ಕಷ್ಟಗಳು ಅಷ್ಟಿಷ್ಟಲ್ಲ. ಈ ಪರಿಣಾಮದಿಂದ ಅನೇಕ ದೇಶಗಳು ಆರ್ಥಿಕ ನಷ್ಟವನ್ನು ಎದುರಿಸುತ್ತಿವೆ.

ಈ ಕಾರಣದಿಂದ ಕರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ವೈದ್ಯಕೀಯ ತಂಡಗಳು ಹಲವಾರು ಪ್ರಯತ್ನಗಳನ್ನು ಪ್ರಾರಂಭಿಸಿವೆ. ಇದರ ಭಾಗವಾಗಿ, ನಮ್ಮ ದೇಶದಲ್ಲಿ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಸಹ ಪ್ರಾರಂಭಿಸಲಾಗಿದೆ.

ಮೊದಲ ಹಂತದ ವ್ಯಾಕ್ಸಿನೇಷನ್ ಕಾರ್ಯಕ್ರಮದ ಭಾಗವಾಗಿ ದೇಶಾದ್ಯಂತ ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಕರೋನಾ ಲಸಿಕೆ ನೀಡಲಾಗುತ್ತಿದೆ. ಇತ್ತೀಚೆಗೆ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಪೋಲಿಯೋ ಮುಕ್ತ ದೇಶವಾಗಿ ನಮ್ಮ ಭಾರತ ದೇಶ ಬದಲಾದ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ಅದೇ ರೀತಿ ಕರೋನ ಮುಕ್ತ ದೇಶ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ದಿನ ಕೂಡ ಬರುತ್ತದೆ ಎಂದು ಹೇಳಿದ್ದಾರೆ.

Vijayaprabha Mobile App free

ಕಳೆದ ವರ್ಷ ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ಅವರಿಗೆ ಕರೋನಾ ಇರುವುದು ಪತ್ತೆಯಾಗಿತ್ತು. ನಂತರ, ಅವರ ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯಾ ಕೂಡ ಕರೋನಾಗೆ ಸೋಂಕಿಗೆ ತುತ್ತಾಗಿದ್ದರು. ನಂತರ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.