ರೇಣುಕಾಸ್ವಾಮಿ ಕೊಲೆ ಕೇಸ್: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 6 ಆರೋಪಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಇಂದು ಏನಾಗಲಿದೆ? ಎಂದು ತೀವ್ರ ಕುತೂಹಲ ಕೆರಳಿಸಿದೆ.
ಹೌದು, ಬೆಂಗಳೂರಿನ ನ್ಯಾಯಾಲಯ ಈಗಾಗಲೇ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಪ್ರಕಟ ಮಾತ್ರ ಬಾಕಿ ಇದೆ. SPP ಪ್ರಸನ್ನಕುಮಾರ್ & ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರ ಸುದೀರ್ಘ ವಾದ-ಪ್ರತಿವಾದ ಆಲಿಸಿದ 57ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಜೈಶಂಕರ್ ಅವರು ಜಾಮೀನು ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದಾರೆ.
ಇದನ್ನೂ ಓದಿ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಬೆಳ್ಳಂಬೆಳಗ್ಗೆ ಬೇಸರದ ಸುದ್ದಿ; ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್‌ಬೈ!
ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ರವಿಶಂಕರ್, ನಾಗರಾಜ್, ದೀಪಕ್ ಮತ್ತು ಲಕ್ಷ್ಮಣ್ ಅವರ ಅರ್ಜಿಗಳ ತೀರ್ಪನ್ನು ಸಹ ಇಂದೇ ಪ್ರಕಟಿಸಲಿದೆ. ದರ್ಶನ್ ಪರ ಸಿವಿ ನಾಗೇಶ್, ಎಸ್‌ಪಿಪಿ ಪರ ಪ್ರಸನ್ನ ಕುಮಾರ್ ಈಗಾಗಲೇ ವಾದ ಮಂಡಿಸಿದ್ದಾರೆ. ದರ್ಶನ್‌ಗೆ ಜಾಮೀನು ಸಿಗದಿದ್ದರೆ ಹೈಕೋರ್ಟ್‌ಗೆ ಮೊರೆ ಹೋಗುವ ಸಾಧ್ಯತೆಯಿದೆ.