ಬೆಂಗಳೂರು: ಇಂದು ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರು ಅಧಿಕಾರ ಸ್ವೀಕರಿಸಿದರು.
ಸಿಎಂ ಯಡಿಯೂರಪ್ಪ, ಕೃಷಿ ಸಚಿವ ಬಿಸಿ ಪಾಟೀಲ್ ಅವರ ನೇತೃತ್ವದಲ್ಲಿ ನಟ ದರ್ಶನ್ ಅವರು ಕೃಷಿ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ‘ರೈತರಿಗೂ ಜನರಿಗೂ ಇರುವುದು ರಕ್ತ ಸಂಬಂಧ. ಇದಕ್ಕೆ ನಾನು ಶ್ರಮಿಸುತ್ತೇನೆ’ ಎಂದು ದರ್ಶನ್ ಹೇಳಿದ್ದಾರೆ.
ಇನ್ನು ಸಿಎಂ ಯಡಿಯೂರಪ್ಪ ಅವರು ಮಾತನಾಡಿ, ನಟ ದರ್ಶನ್ ನಟನೆಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಯಾಗಿದ್ದು, ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.