ಪಣಜಿ: ತನ್ನ 55 ನೇ ಹುಟ್ಟುಹಬ್ಬದ ದಿನದಂದು ಬೀಚ್ ನಲ್ಲಿ ಬೆತ್ತಲಾಗಿ ಓಡಿದ ಬಾಲಿವುಡ್ ಹಿರಿಯ ನಟ ಮಿಲಿಂದ್ ಸೋಮನ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಬಾಲಿವುಡ್ ನಟಿ ಪೂನಂ ಪಾಂಡೆ ಅವರನ್ನು ಬಂಧಿಸಲಾಗಿದೆ. ಇದ್ಯಾವ ನ್ಯಾಯ ಎಂದು ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.
ಗೋವಾದ ಚಾಪೋಲಿ ಅಣೆಕಟ್ಟಿನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ದೂರಿನ ಹಿನ್ನೆಲೆಯಲ್ಲಿ ಪೂನಂ ಪಾಂಡೆಯನ್ನು ಮತ್ತು ವಿಡಿಯೋ ತೆಗೆದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಗೋವಾ ಪೊಲೀಸರು ಬಂಧಿಸಿದ್ದಾರೆ. ಚಾಪೋಲಿ ಅಣೆಕಟ್ಟು ಮತ್ತು ಗೋವಾ ಸಂಸ್ಕೃತಿಯ ಪಾವಿತ್ರ್ಯವನ್ನು ಉಲ್ಲಂಘಿಸುವ ರೀತಿಯಲ್ಲಿ ವರ್ತಿಸಿದ್ದಕ್ಕಾಗಿ ಪೂನಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಟಿ ಪೂನಂ ಪಾಂಡೆ ಬಂಧನವೇನೋ ಸರಿ. ಹಾಗಾದರೆ ಗೋವಾ ಬೀಚ್ನಲ್ಲಿ ಬೆತ್ತಲೆಯಾಗಿ ಓಡಾಡಿದ ನಟ ಹಾಗೂ ಮಾಡಲ್ ಮಿಲಿಂದ್ ಸೋಮನ್ ಅವರನ್ನು ಯಾಕೆ ಬಂಧಿಸಲಿಲ್ಲ ಎಂದು ನೆಟ್ಟಿಗರು ಗೋವಾ ಪೊಲೀಸರನ್ನು ಪ್ರಶ್ನಿಸಿದ್ದಾರೆ.