ಬೆಂಗಳೂರು: ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆಯನ್ನಾಗಿ ಹಿರಿಯ ನಟಿ ಶ್ರುತಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಇಂದು ಆದೇಶ ಹೊರಡಿಸಿದೆ.
ಹೌದು, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆಎಸ್ ಟಿಡಿಸಿ) ಅಧ್ಯಕ್ಷರಾಗಿದ್ದ ಹಿರಿಯ ನಟಿ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆಯುವ ಮೂಲಕ ಶಾಕ್ ನೀಡಿ, ಈ ಸ್ಥಾನಕ್ಕೆ ಅಚ್ಚರಿ ಎಂಬಂತೆ ಸಿಎಂ ಯಡಿಯೂರಪ್ಪ ಅವರ ಮನೆಯಲ್ಲಿ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಇಂದು ಹಿರಿಯ ನಟಿ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು ಶ್ರುತಿ ಅವರಿಗೆ ಬೇರೆ ಜವಾಬ್ದಾರಿ ನೀಡಿದೆ.
ಇನ್ನು, ಸಿಎಂ ತಮ್ಮ ಆಪ್ತರನ್ನೇ ಕೆಎಸ್ ಟಿಡಿಸಿಗೆ ನೇಮಿಸುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂಬ ಸಂದೇಶವನ್ನು ಬಿಜೆಪಿ ಹೈಕಮಾಂಡ್ ಗೆ ರವಾನಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗುತ್ತಿದೆ.