ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮೊಟ್ಟೆಯನ್ನು ನೀಡುತ್ತಿದ್ದು, ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆ ಅನುಮತಿ ಕೋರಿ ರಾಜ್ಯ ಶಿಕ್ಷಣ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಜೋಳ ಮತ್ತು ರಾಗಿ ಉಗ್ರಾಣಗಳನ್ನು ಬಳಸಿ ಮಕ್ಕಳಿಗೆ ಬಿಸಿಯೂಟ ಆಹಾರ ನೀಡುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ನೀಡಿದೆ.
ಇನ್ನು ಕೇಂದ್ರ ಒಪ್ಪಿದರೆ, ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ರಾಗಿ ಮುದ್ದೆ ಮತ್ತು ಜೋಳದ ರೊಟ್ಟಿ ಪ್ರಸ್ತಾವನೆಗೆ ಸಮ್ಮತಿಸಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.