Diwali festival : ದೀಪಾವಳಿ ಹಬ್ಬ ಹಿನ್ನಲೆ, ಪ್ರಯಾಣಿಕರ ಅನುಕೂಲಕ್ಕಾಗಿ & ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರಾಜ್ಯದಲ್ಲಿ ಸಂಚರಿಸುವ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ.
Diwali festival : ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ
ಹೌದು, ನವಂಬರ್ 3-4 ರಂದು ರೈಲು ಸಂಖ್ಯೆ 17309 ಯಶವಂತಪುರ – ವಾಸ್ಕೋ ಡ ಗಾಮಾ ಡೈಲಿ ಎಕ್ಸ್ಪ್ರೆಸ್ ಮತ್ತು ನವಂಬರ್ 2 & 3 ರಂದು ಸಂಚರಿಸುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ – ಯಶವಂತಪುರ ಡೈಲಿ ಎಕ್ಸ್ಪ್ರೆಸ್ ರೈಲುಗಳಿಗೆ, ಹೆಚ್ಚುವರಿ ತಲಾ ಒಂದು ಎಸಿ-3 ಬೋಗಿಯನ್ನು ಜೋಡಣೆ ಮಾಡಲಾಗುತ್ತಿದೆ.
ನವೆಂಬರ್ 5ರಂದು ರೈಲು ಸಂಖ್ಯೆ 06244 ಹೊಸಪೇಟೆ –ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ಸ್ಪೆಷಲ್ ಮತ್ತು ರೈಲು ಸಂಖ್ಯೆ 06246 ಹರಿಹರ-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳಿಗೆ ಹೆಚ್ಚುವರಿ ತಲಾ ಒಂದು ಸ್ಲೀಪರ್ ಕ್ಲಾಸ್ ಬೋಗಿಯನ್ನು ಜೋಡಿಸಲಾಗುತ್ತಿದೆ.
ಇದನ್ನೂ ಓದಿ: Deepavali : ಐದು ದಿನದ ದೀಪಾವಳಿ ಆಚರಣೆ ಮಹತ್ವ, ಪೂಜಾ ಸಮಯ
ನವೆಂಬರ್ 6 ರಂದು ಹೊರಡುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ಮಾರ್ಗದ ರೈಲಿಗೆ ಹೆಚ್ಚುವರಿ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲಾಗುತ್ತಿದೆ.
ನವೆಂಬರ್ 3 ರಂದು 07339 ಹುಬ್ಬಳ್ಳಿ-ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ಸ್ಪೆಷಲ್ & 17392 ಎಸ್ಎಸ್ಎಸ್ ಹುಬ್ಬಳ್ಳಿ-ಬೆಂಗಳೂರು ಡೈಲಿ ಎಕ್ಸ್ಪ್ರೆಸ್ ರೈಲುಗಳಿಗೆ ಹೆಚ್ಚುವರಿ ತಲಾ ಒಂದು ಸ್ಲೀಪರ್ ಕ್ಲಾಸ್ ಬೋಗಿಯನ್ನು ಜೋಡಣೆ ಮಾಡಲಾಗುತ್ತಿದೆ.
ಇನ್ನು, ನವೆಂಬರ್ 4 ರಂದು 07340 ಬೆಂಗಳೂರು–ಹುಬ್ಬಳ್ಳಿ ಡೈಲಿ ಎಕ್ಸ್ಪ್ರೆಸ್ ಸ್ಪೆಷಲ್ ಹಾಗೂ 06243 ಬೆಂಗಳೂರು–ಹೊಸಪೇಟೆ ಡೈಲಿ ಎಕ್ಸ್ಪ್ರೆಸ್ ಸ್ಪೆಷಲ್ & 06245 ಹೊಸಪೇಟೆ–ಹರಿಹರ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳಿಗೆ ಹೆಚ್ಚುವರಿ ತಲಾ 1 ಸ್ಲೀಪರ್ ಕ್ಲಾಸ್ ಬೋಗಿಯನ್ನು ಜೋಡಿಸಲಾಗುತ್ತಿದೆ.