Ahmadabad: ಸಂಶೋಧನೆ ವೇಳೆ ಮಣ್ಣು ಕುಸಿದು PhD ವಿದ್ಯಾರ್ಥಿನಿ ಸಾವು!

ಅಹಮದಾಬಾದ್‌: ದಿಢೀರ್ ಮಣ್ಣು ಕುಸಿದ ಪರಿಣಾಮ ಸಂಶೋಧನೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಜೀವಂತ ಸಮಾಧಿಯಾದ ಘಟನೆ ಗುಜರಾತ್‌ನ ಲೋಥಾಲ್‌ನಲ್ಲಿ ನಡೆದಿದೆ. ಪುರಾತತ್ವ ಇಲಾಖೆಯ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಸಂಶೋಧನೆ ನಡೆಸುತ್ತಿದ್ದಾಗ ದಿಢೀರ್ ಮಣ್ಣು ಕುಸಿದು ಐಐಟಿ…

ಅಹಮದಾಬಾದ್‌: ದಿಢೀರ್ ಮಣ್ಣು ಕುಸಿದ ಪರಿಣಾಮ ಸಂಶೋಧನೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಜೀವಂತ ಸಮಾಧಿಯಾದ ಘಟನೆ ಗುಜರಾತ್‌ನ ಲೋಥಾಲ್‌ನಲ್ಲಿ ನಡೆದಿದೆ.

ಪುರಾತತ್ವ ಇಲಾಖೆಯ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಸಂಶೋಧನೆ ನಡೆಸುತ್ತಿದ್ದಾಗ ದಿಢೀರ್ ಮಣ್ಣು ಕುಸಿದು ಐಐಟಿ ದೆಹಲಿಯ ವಿದ್ಯಾರ್ಥಿನಿ ಸುರಭಿ ವರ್ಮಾ(23) ಮೃತಪಟ್ಟಿದ್ದಾರೆ. ಇತರೆ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಪೈಕಿ ದೆಹಲಿ ಐಐಟಿಯ ಪ್ರೊಫೆಸರ್ ಯಮಾ ದೀಕ್ಷಿತ್ (45) ಎಂಬುವರ ಆರೋಗ್ಯ ಗಂಭೀರವಾಗಿದೆ. ದೀಕ್ಷಿತ್ ಐಐಟಿ ದೆಹಲಿಯ ವಾತಾವರಣ ವಿಜ್ಞಾನ ಕೇಂದ್ರದಲ್ಲಿ (ಸಿಎಎಸ್) ಸಹಾಯಕ ಪ್ರಾಧ್ಯಾಪಕರಾಗಿದ್ದು, ಸುರಭಿ ವರ್ಮಾ ಅವರ ನಿರ್ದೇಶನದಲ್ಲಿ ಸಂಶೋಧನೆ ನಡೆಸುತ್ತಿದ್ದರು. ತಂಡದ ಇತರ ಇಬ್ಬರು ಸದಸ್ಯರಾದ ಅಸೋಸಿಯೇಟ್ ಪ್ರೊಫೆಸರ್ ವಿ.ಎನ್.ಪ್ರಭಾಕರ್ ಮತ್ತು ಹಿರಿಯ ಸಂಶೋಧಕಿ ಶಿಖಾ ರೈ ಕೂಡ ಸ್ಥಳದಲ್ಲಿದ್ದರು.

Vijayaprabha Mobile App free

ಅಹಮದಾಬಾದ್‌ನಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ಪುರಾತನ ಸಿಂಧೂ ನಾಗರಿಕತೆಯ ಸ್ಥಳದಲ್ಲಿ ಸಂಶೋಧನೆ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಐಐಟಿ ದೆಹಲಿ ಮತ್ತು ಐಐಟಿ ಗಾಂಧಿನಗರದ ತಲಾ ಇಬ್ಬರು ಸೇರಿ ನಾಲ್ವರು ಸಂಶೋಧಕರ ತಂಡ ಅಧ್ಯಯನಕ್ಕಾಗಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಲು ಹರಪ್ಪ ಬಂದರು ನಗರ ಲೋಥಾಲ್‌ಗೆ ತೆರಳಿತ್ತು. ಮಣ್ಣು ಪರೀಕ್ಷೆಗೆಂದು ತೆಗೆದ 10 ಅಡಿ ಆಳದ ಗುಂಡಿಗೆ ನಾಲ್ವರೂ ಇಳಿದಿದ್ದಾರೆ. ಈ ವೇಳೆ ಹಠಾತ್ ಗೋಡೆ ಕುಸಿದು ಮಣ್ಣಿನ ರಾಶಿಯಡಿಯಲ್ಲಿ ಎಲ್ಲರೂ ಹೂತು ಹೋಗಿದ್ದರು.

ಸಂಶೋಧಕಿ ಸುರಭಿ ವರ್ಮಾ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸ್‌ ವರಿಷ್ಠಾಧಿಕಾರಿ (ಗ್ರಾಮೀಣ) ಓಂಪ್ರಕಾಶ್ ಜಾಟ್ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.