BREAKING: ಅಹಮದಾಬಾದ್ ಸ್ಫೋಟ ಪ್ರಕರಣ: 38 ಮಂದಿಗೆ ಮರಣದಂಡನೆ,11 ಮಂದಿಗೆ ಜೀವಾವಧಿ ಶಿಕ್ಷೆ

ಗಾಂಧಿನಗರ : ಅಹಮದಾಬಾದ್ ಸ್ಫೋಟ ಪ್ರಕರಣ ಸಂಬಂಧ ಗುಜರಾತ್‌ನ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, 38 ಮಂದಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹೌದು, ಜುಲೈ 26, 2008ರಲ್ಲಿ…

court judgement vijayaprabha news

ಗಾಂಧಿನಗರ : ಅಹಮದಾಬಾದ್ ಸ್ಫೋಟ ಪ್ರಕರಣ ಸಂಬಂಧ ಗುಜರಾತ್‌ನ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದು, 38 ಮಂದಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಹೌದು, ಜುಲೈ 26, 2008ರಲ್ಲಿ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 56 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಗೋಧ್ರಾ ನಂತರದ ದಂಗೆಗೆ ಪ್ರತೀಕಾರ ತೀರಿಸಿಕೊಳ್ಳಲು ಇಂಡಿಯನ್ ಮುಜಾಹಿದೀನ್ (ಐಎಂ) ಉಗ್ರರು ಈ ಸ್ಫೋಟ ನಡೆಸಿದ್ದರು ಎಂದು ಹೇಳಲಾಗಿತ್ತು.

ಇನ್ನು, ಅಹಮದಾಬಾದ್ ಸ್ಫೋಟ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಗುಜರಾತ್ ವಿಶೇಷ ನ್ಯಾಯಾಲಯ 49 ಅಪರಾಧಿಗಳ ಪೈಕಿ 38 ಮಂದಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.