ಬಿಜೆಪಿಯ ಎಲ್ಲ ಶಾಸಕರು ಸಿಂಹದ ಮರಿಗಳು, ತಾಕತ್ತಿದ್ದರೆ ಪಟ್ಟಿಯನ್ನೇ ಬಿಡುಗಡೆ ಮಾಡಲಿ: ಶಾಸಕ ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂಬ ಹೆಸರು ಮಾತ್ರವಲ್ಲ, ತಾಕತ್ತಿದ್ದರೆ ಪಟ್ಟಿಯನ್ನೇ ಬಿಡುಗಡೆ ಮಾಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ.ರೇಣುಕಾಚಾರ್ಯ ಕಿಡಿ ಕಾರಿದ್ದಾರೆ. ಹೊನ್ನಾಳಿಯಲ್ಲಿ ಮಾಧ್ಯಮದವರ ಜೊತೆ…

mp renukacharya vijayaprabha

ದಾವಣಗೆರೆ: ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂಬ ಹೆಸರು ಮಾತ್ರವಲ್ಲ, ತಾಕತ್ತಿದ್ದರೆ ಪಟ್ಟಿಯನ್ನೇ ಬಿಡುಗಡೆ ಮಾಡಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ.ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.

ಹೊನ್ನಾಳಿಯಲ್ಲಿ ಮಾಧ್ಯಮದವರ ಜೊತೆ ಮಾತಾಡಿದ ಎಂ. ಪಿ.ರೇಣುಕಾಚಾರ್ಯ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಮಾತಿಗೆ ಖಾರವಾಗಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿಯ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದು, 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದ್ರೆ, ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಇದೆ. ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯ ಪ್ರತಿಯೊಬ್ಬ ಶಾಸಕರು ಸಿಂಹದ ಮರಿಗಳಿದ್ದಂತೆ, ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಶಾಸಕ ಎಂ. ಪಿ.ರೇಣುಕಾಚಾರ್ಯ ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.