ಹೊಸಪೇಟೆ: ಹೊಸಪೇಟೆಯಲ್ಲಿಂದು ದಿನೇ ದಿನೇ ಏರಿಕೆಯಾಗುತ್ತಿರುವ ತೈಲ ಬೆಲೆಯೇರಿಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಆನಂದ್ ಸಿಂಗ್, ಸದ್ಯದ ಪರಿಸ್ಥಿತಿಯಲ್ಲಿ ದೇಶದಲ್ಲಿ ಬೇರೆ ಪಕ್ಷದ ಪಿಎಂ ಇದ್ದರೆ ಪೆಟ್ರೋಲ್ ಬೆಲೆ ₹30 ಮಾಡಲು ಆಗುತ್ತಿತ್ತೇ? ಎಂದು ಪ್ರಶ್ನಿಸಿದ್ದಾರೆ.
ಇನ್ನು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ಬದಲಾವಣೆಗಳಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರುಪೇರಾಗುತ್ತದೆ. ಇದಕ್ಕೆ ಪ್ರಧಾನಿ ಮೋದಿ ಕಾರಣ ಎನ್ನುವುದು ಸರಿಯಲ್ಲ. ರಾಜ್ಯ ಸರ್ಕಾರ ತೆರಿಗೆ ಕಡಿಮೆಗೊಳಿಸುವ ಬಗ್ಗೆ ಚರ್ಚಿಸುತ್ತಿದೆ ಎಂದು ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.