Law Student Gangraped: ಪ್ರಿಯಕರನಿಂದಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಕಾನೂನು ವಿದ್ಯಾರ್ಥಿನಿಯನ್ನು ಆಕೆಯ ಪ್ರಿಯಕರ ಹಾಗೂ ಆತನ ಮೂವರು ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರಗೈದ ಧಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕರ ಗುಂಪು ಆಕೆಯ ಖಾಸಗಿ ವೀಡಿಯೊಗಳನ್ನು ಚಿತ್ರೀಕರಿಸಿಕೊಂಡು…

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಕಾನೂನು ವಿದ್ಯಾರ್ಥಿನಿಯನ್ನು ಆಕೆಯ ಪ್ರಿಯಕರ ಹಾಗೂ ಆತನ ಮೂವರು ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರಗೈದ ಧಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕರ ಗುಂಪು ಆಕೆಯ ಖಾಸಗಿ ವೀಡಿಯೊಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್‌ಮೇಲ್ ಕೂಡ ಮಾಡಿದ್ದಾಗಿ ವಿದ್ಯಾರ್ಥಿನಿ ಹೇಳಿಕೆ ನೀಡಿದ್ದಾಳೆ. ಇದರ ಆಧಾರದ ಮೇಲೆ ಪೊಲೀಸರು ಪೀಡಿತೆಯ ಪ್ರಿಯಕರ ವಂಸಿ ಸೇರಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ವಿಶಾಖಪಟ್ಟಣಂ ಪೊಲೀಸ್ ಕಮಿಷನರ್ ಶಂಕ ಬ್ರತ ಬಗ್ಚಿ ಈ ಕುರಿತು ಮಾಹಿತಿ ನೀಡಿದ್ದು, ಆರೋಪಿ ವಂಸಿ ಮತ್ತು ವಿದ್ಯಾರ್ಥಿನಿಯು ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಪ್ರೀತಿಸುತ್ತಿದ್ದರು. 2024ರ ಆಗಸ್ಟ್ 13 ರಂದು ಮುಖ್ಯ ಆರೋಪಿ ವಿದ್ಯಾರ್ಥಿನಿಯನ್ನು ವಿಶಾಖಪಟ್ಟಣಂನ ಕೃಷ್ಣ ನಗರದಲ್ಲಿರುವ ತನ್ನ ಸ್ನೇಹಿತನ ಮನೆಗೆ, ಕರೆದೊಯ್ದಿದ್ದನು. ಅಲ್ಲಿ ಆಕೆಯ ಮೇಲೆ ನಾಲ್ವರಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು.

ಆ ಬಳಿಕ ವಂಸಿ ಮತ್ತು ಇತರೆ ಮೂವರು ಆರೋಪಿಗಳು, ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಆಕೆಯನ್ನು ಬೆದರಿಸಿದ್ದರು. ನಂತರ ಮತ್ತೊಮ್ಮೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.  

Vijayaprabha Mobile App free

ಆರೋಪಿಗಳ ಕಿರುಕುಳಕ್ಕೆ ಬೇಸತ್ತಿದ್ದ ವಿದ್ಯಾರ್ಥಿನಿ ನವೆಂಬರ್ 18 ರಂದು ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಆಕೆಯ ತಂದೆ ಅವಳನ್ನು ರಕ್ಷಿಸಿದ್ದರು. ಈ ವೇಳೆ ತನಗಾದ ಅನ್ಯಾಯವನ್ನು ಕುಟುಂಬದೊಂದಿಗೆ ವಿದ್ಯಾರ್ಥಿನಿ ಹಂಚಿಕೊಂಡ ನಂತರ ಪೊಲೀಸರ ಬಳಿ ದೂರು ದಾಖಲಿಸಿದ್ದರು. ಕೂಡಲೇ ತನಿಖೆ ಆರಂಭಿಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಪತ್ತೆಹಚ್ಚಿ ಮಂಗಳವಾರ ಬಂಧಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.