Anna bhagya yojana : ಕರ್ನಾಟಕ ಕಾಂಗ್ರೆಸ್ ಸರ್ಕಾರ ಐದು ಮಹತ್ವ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಒಂದಾಗಿದ್ದು, ಈ ಯೋಜನೆಯ ಹಣಕ್ಕೂ ಇದೀಗ ಗ್ರಹಣ ಹಿಡಿದಿದ್ದು, ಎರಡು ತಿಂಗಳಿನಿಂದ ಹಣ ಬಂದಿಲ್ಲ ಎಂದು ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ದ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೌದು, ಬಿಪಿಎಲ್ ಕಾರ್ಡ್‌ದಾರರ ಫಲಾನುಭವಿಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರಕಾರ ಫಲಾನುಭವಿಗಳ ಮುಖ್ಯಸ್ಥರ ಖಾತೆಗೆ ಹಣ ಹಾಕಲು ಮುಂದಾಗಿತ್ತು. ಸರ್ಕಾರ ನೀಡುತ್ತಿರುವ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲು ಹಣವನ್ನು ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಆದ್ರೆ ಕಳೆದ ಎರಡು ತಿಂಗಳಿಂದ ಹಣ ಪಾವತಿಯಾಗಿಲ್ಲ. ಹೀಗಾಗಿ ಪ್ರತಿದಿನ ಬೆಂಗಳೂರು ಒನ್ ಹಾಗೂ ಬ್ಯಾಂಕ್ ಗಳನ್ನ ಸುತ್ತುತ್ತಿದ್ದು, ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: Alamelamma curse : ಮೈಸೂರು ರಾಜರಿಗೆ ಅಲಮೇಲಮ್ಮನ ಶಾಪ; ಅದರ ಹಿಂದಿನ ಕಥೆ ಇಲ್ಲಿದೆ
Anna bhagya yojana : ಮುಂದಿನ ವಾರ ನಿಮ್ಮ ಖಾತೆಗೆ ಹಣ ಜಮಾ
ಬಿಪಿಎಲ್ ಕಾರ್ಡ್‌ದಾರರ ಫಲಾನುಭವಿಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯ ಹಣ ಕೆಲವು ತಿಂಗಳುಗಳಿಂದ ಜನರ ಖಾತೆಗೆ ಹಣ ಬಂದಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆಲ್ಲ ಉತ್ತರಿಸಿದ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಸರ್ವರ್ ಸಮಸ್ಯೆಯಿಂದ ಅನ್ನಭಾಗ್ಯ ಹಣ ಬಿಡುಗಡೆ ವಿಳಂಬವಾಗಿದ್ದು, ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.