ಪಾರಂಪರಿಕವಾಗಿ ತಿಂಡಿ-ತಿನಿಸುಗಳನ್ನು ಮಾಡಿಕೊಂಡು ಬಂದಿರುವ ಆರ್ಯ-ವೈಶ್ಯ ಸಮುದಾಯಕ್ಕೆ ಫುಡ್ ಟ್ರಕ್ ತೆರೆಯಲು ಆರ್ಯ-ವೈಶ್ಯ ಆಹಾರ ವಾಹಿನಿ ಯೋಜನೆ ಜಾರಿಗೆ ತಂದಿದ್ದು, ಇದರಡಿ 2 ಲಕ್ಷ ರೂ. ನೆರವು ನೀಡಲಾಗುತ್ತದೆಂದು ಆರ್ಯ-ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಹೌದು,ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಆರ್ಯ-ವೈಶ್ಯ ಅಭಿವೃದ್ಧಿ ನಿಗಮದಡಿ ತರಬೇತಿ ಕೂಡ ನೀಡಲಾಗುತ್ತದೆ. 6 ಲಕ್ಷದೊಳಗೆ ವರಮಾನ ಹೊಂದಿರುವ ಮತ್ತು 21-55ರ ನಡುವಿನ ವಯೋಮಾನದವರು ಡಿಸೇಂಬರ್ 20ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.