ಹೈದರಾಬಾದ್: ರಾಷ್ಟೀಯ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹೊಡೆತ ಬೀಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಖ್ಯಾತ ನಟಿ ಖುಷ್ಬೂ ಸುಂದರ್ ಅವರು ಈಗಾಗಲೇ ತಮಿಳುನಾಡಿ ನಲ್ಲಿ ಕಾಂಗ್ರೆಸ್ ಪಕ್ಷ ತೊರೆದಿದ್ದು, ಅವರ ಹಾದಿಯಲ್ಲಿ ಈಗ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟಿ ವಿಜಯಶಾಂತಿ ಅವರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂಬ ವದಂತಿ ಹಬ್ಬಿದೆ.
ಹೌದು ತೆಲಂಗಾಣ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ವಿಜಯಶಾಂತಿ ಅವರು ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಲಿದ್ದಾರೆ ಎಂದು ‘ಆಂಧ್ರ ಜ್ಯೋತಿ’ ಲೇಖನವೊಂದರಲ್ಲಿ ತಿಳಿಸಿದೆ. ಲೇಖನದ ಪ್ರಕಾರ, ವಿಜಯಶಾಂತಿ ಕೆಲವು ಸಮಯದಿಂದ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವಿದ್ದಾರೆ ಎನ್ನಲಾಗಿದ್ದು. ಡಬ್ಬಾಕ್ ಉಪಚುನಾವಣೆ ನಡೆಯುತ್ತಿರುವುದನ್ನು ಕಣ್ಣೆತ್ತಿ ಕೂಡ ನೋಡಿಲ್ಲ. ಕನಿಷ್ಠ ಸಾಮಾಜಿಕ ಮಾಧ್ಯಮಗಳ ಮೂಲಕ ಕಾಂಗ್ರೆಸ್ಸಿಗೆ ಮತ ಚಲಾಯಿಸುವ ಕರೆ ಕೂಡ ನೀಡಲಿಲ್ಲ. ಇದರಿಂದ ನಟಿ ವಿಜಯಶಾಂತಿ ಅವರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಈಗಿರುವಾಗ ಎರಡು ದಿನಗಳ ಹಿಂದೆ ಹೈದರಾಬಾದ್ ಜುಬಿಲಿ ಹಿಲ್ಸ್ ನಲ್ಲಿರುವ ವಿಜಯಶಾಂತಿ ಅವರ ನಿವಾಸಕ್ಕೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರು ಭೇಟಿ ನೀಡಿದ್ದು, ಸುಮಾರು ಅರ್ಧ ಘಂಟೆಯವರೆಗೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ.
ವಿಜಯಶಾಂತಿ ಅವರು ನವೆಂಬರ್ 10 ರೊಳಗೆ ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿದುಬಂದಿದ್ದು, ದೆಹಲಿ ಹಿರಿಯರ ಸಮ್ಮುಖದಲ್ಲಿ ವಿಜಯಶಾಂತಿ ಅವರು ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಇದನ್ನು ಓದಿ: ಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನಕ್ಕೆ ಸಿದ್ದರಾಮಯ್ಯ,ಈಶ್ವರಪ್ಪ ಸಂತಾಪ!