ನವದೆಹಲಿ: ಕೇಂದ್ರ ಸರ್ಕಾರ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ತುಟ್ಟಿ ಭತ್ಯೆ ಹೆಚ್ಚಳ ಘೋಷಣೆಯ ನಂತರ, ಇದೀಗ ನೌಕರರ ಮನೆ ಬಾಡಿಗೆ ಭತ್ಯೆ (ಎಚ್‌ಆರ್‌ಎ )ಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.
ಹೌದು, ಶೇ.27ರಷ್ಟು ಮನೆ ಬಾಡಿಗೆ ಭತ್ಯೆಯನ್ನು ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ನೌಕರರಿಗೆ ಡಬಲ್ ಗಿಫ್ಟ್ ನೀಡಿದೆ. ತುಟ್ಟಿ ಭತ್ಯೆ ಶೇ. 25 ದಾಟಿದಾಗ, ಎಚ್‌ಆರ್‌ಎಯನ್ನು ಪರಿಷ್ಕರಿಸಲಾಗುವುದು ಎಂದು ತಿಳಿಸಿ ಖರ್ಚು ಇಲಾಖೆ 7 ಜುಲೈ 2017 ರಂದು ಆದೇಶ ಹೊರಡಿಸಿತ್ತು. ಜುಲೈ 1ರಿಂದ, ಡಿಎ ಶೇ. 28ಕ್ಕೆ ಏರಿಕೆ ಮಾಡಲಾಗಿದ್ದು, ಎಚ್‌ಆರ್‌ಎ ಸಹ ಪರಿಷ್ಕರಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.