ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ‌ ದರ ಮತ್ತೆ ಏರಿಕೆ..?

ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗಲಿದ್ದು, ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹3 ರಂತೆ ಹೆಚ್ಚಿಸುವಂತೆ…

milk-producers-vijayaprabha-news

ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗಲಿದ್ದು, ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (KMF) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಹೌದು, ಹಾಲಿನ ಪಾಕೆಟ್ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಾಯ ಮಾಡುತ್ತಿದ್ದಾರೆ. ‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ, KMF ಹಾಲಿನ ದರ ಕಡಿಮೆ. ಹೀಗಾಗಿ, ದರ ಏರಿಸಲು ಕೋರಿದ್ದೇವೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ನಡೆದಿದೆ. ಏರಿಕೆ ದರದ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂದು KMF ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌ ತಿಳಿಸಿದ್ದಾರೆ.

ಇನ್ನು, ಪ್ರಸ್ತುತ ಪ್ರತೀ ಲೀಟರ್ ಹಾಲಿನ ಪಾಕೆಟ್ ದರ 37 ರೂ. ಇದ್ದು, ಸರ್ಕಾರ ಒಪ್ಪಿದರೆ 40 ರೂ ಆಗಲಿದೆ. ಈ ನಿರ್ಣಯದಿಂದ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.