ಬಳ್ಳಾರಿ,ಅ.08 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 11ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ಹೌದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವೆಬ್‌ಸೈಟ್‌ನ https://shp.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರ ‘ಕೈ’ ತಪ್ಪಲು 5 ಪ್ರಮುಖ ಕಾರಣ
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಬಳಿಯ ಮೌಲನಾ ಅಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224, ಮೊ.8746818180 ಹಾಗೂ ಆಯಾ ತಾಲ್ಲೂಕು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.