ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಬೇಗನೆ ಅರ್ಜಿ ಸಲ್ಲಿಸಿ

ಬಳ್ಳಾರಿ,ಅ.15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.…

ಬಳ್ಳಾರಿ,ಅ.15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಮಾಜಿ ದೇವದಾಸಿ ಮಹಿಳೆಯರ ನಿವೇಶನ ಹೊಂದಿರುವ ವಸತಿ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ದೇವದಾಸಿ ಪುನರ್ವಸತಿ ಯೋಜನೆಯಡಿ ಬಳ್ಳಾರಿ ಜಿಲ್ಲೆಯ ನಗರ ಪ್ರದೇಶಗಳಿಗೆ 10 ಫಲಾನುಭವಿಗಳಿಗೆ ಘಟಕದ ವೆಚ್ಚ ರೂ.20 ಲಕ್ಷಗಳಂತೆ, ಗ್ರಾಮೀಣ ಪ್ರದೇಶಗಳಿಗೆ 22 ಫಲಾನುಭವಿಗಳಿಗೆ ಘಟಕದ ವೆಚ್ಚ ರೂ.38.50 ಲಕ್ಷಗಳಂತೆ ಸಹಾಯಧನದಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗುವುದು.

ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಪೂರಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಇದೇ ಕಚೇರಿಗೆ ಅ.30 ವರೆಗೆ ಸಲ್ಲಿಸಬಹುದಾಗಿದೆ.

Vijayaprabha Mobile App free

ಬೇಕಾದ ದಾಖಲೆ:

ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ.ನಂಬರ್ ಹೊಂದಿರಬೇಕು), ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಭಾವಚಿತ್ರ-4, ನಿವೇಶನ ಖಾತಾ ಉತ್ತಾರ, ಆಧಾರ್ ಕಾರ್ಡ್ ಪ್ರತಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ನಂಬರ್, ಗ್ರಾಮ ಪಂಚಾಯತಿ ವತಿಯಿಂದ ವಸತಿ ಸೌಲಭ್ಯ ಪಡೆದಿರುವುದಿಲ್ಲವೆಂಬ ದೃಢೀಕರಣ ಪತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಎಸ್‌ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳಮ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.