ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಸೆ.06 :2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ…

Medical Education vijayaprabha news

ದಾವಣಗೆರೆ ಸೆ.06 :2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಚಿಸುವವರು, ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 20 ದಿನಗಳೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರವನ್ನು ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ ಆನ್‍ಲೈನ್ ಮೂಲಕ ಕೆ.ಎಸ್.ಬಿ ಜಾಲತಾಣದಲ್ಲಿ www.ksb.gov.in ನಲ್ಲಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆ.ಎಸ್.ಬಿ ಜಾಲತಾಣ www.ksb.gov.in ನಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.