ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಯೋಜನೆ ಜಾರಿಗೆ ತಂದಿದೆ. 60-64 ವರ್ಷ ವಯೋಮಾನದವರಿಗೆ ಮಾಸಿಕ ₹600, 65 ವರ್ಷ ಮೇಲ್ಪಟ್ಟವರಿಗೆ ₹1200 ನೀಡಲಾಗುತ್ತದೆ.
ಇದಕ್ಕಾಗಿ ಆಧಾರ್ ಕಾರ್ಡ್, ಆದಾಯ (ವಾರ್ಷಿಕ ₹32,000) ಪ್ರಮಾಣ ಪತ್ರ, ವಯಸ್ಸಿನ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಖಾತೆ ಪ್ರತಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ನಾಡ ಕಚೇರಿ ಹಾಗೂ ನೆಮ್ಮದಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.