ಬೆಂಗಳೂರು: ಇತ್ತೀಚಿಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾದ ಹಿನ್ನೆಲೆ ಅರವಿಂದ ಲಿಂಬಾವಳಿ ಅವರು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
‘ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತದ ಅನ್ವಯ ನಾನು ರಾಜೀನಾಮೆ ಸಲ್ಲಿಸುತ್ತಿದ್ದು, ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅವಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಇತ್ತೀಚಿಗೆ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿ ಅರವಿಂದ್ ಲಿಂಬಾವಳಿ ಪ್ರಮಾಣ ಅಧಿಕಾರ ಸ್ವೀಕರಸಿ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದಾರೆ.