Artists salary: ಸಂಕಷ್ಟದಲ್ಲಿರುವ ಕಲಾವಿದರಿಗೆ (Artists) ನೀಡಲಾಗುತ್ತಿರುವ ಮಾಸಾಶನವನ್ನು ಮುಂದಿನ ವರ್ಷದಿಂದ ₹3 ಸಾವಿರಕ್ಕೆ ಹೆಚ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ನೀಡಿದ್ದಾರೆ.
ಇದನ್ನು ಓದಿ: ವಯಸ್ಸು ಕೇವಲ 20 -25 ವರ್ಷ ಈಗಲೇ ಕೂದಲು ಉದುರುವಿಕೆ ಪ್ರಾರಂಭ!; ಏನು ಮಾಡುವುದು?
ಹೌದು, ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ಸದ್ಯ ಪ್ರತಿ ತಿಂಗಳು ₹2 ಸಾವಿರ ಮಾಸಾಶನ ನೀಡಲಾಗುತ್ತಿದೆ. 12 ಸಾವಿರಕ್ಕೂ ಅಧಿಕ ಕಲಾವಿದರು ಮಾಸಾಶನ ಪಡೆಯುತ್ತಿದ್ದು, ಮುಂದಿನ ವರ್ಷದಿಂದ ಮಾಸಾಶನ ಹೆಚ್ಚಿಸಲಾಗುತ್ತದೆ. ಹಿಂದೆ ನಾವು ಅಧಿಕಾರದಲ್ಲಿದ್ದಾಗ ಹೆಚ್ಚಿನ ಅನುದಾನವನ್ನು ಒದಗಿಸಿದ್ದು, ಬಳಿಕ ಬಂದ ಸರ್ಕಾರವು ಅನುದಾನವನ್ನು ಕಡಿತ ಮಾಡಿತ್ತು
ಈಗ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿನ ಅನುದಾನ ನೀಡಿದ್ದು, ಮುಂದಿನ ವರ್ಷ ಅಕಾಡಮಿಗಳಿಗೆ ನೀಡುವ ಅನುದಾನವನ್ನು ಇನ್ನಷ್ಟು ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು