ವಿಜಯನಗರ: ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ.
ಹೌದು ತಾರಿಹಳ್ಳಿ ವೆಂಕಟೇಶ್ ಕೊಲೆಯಾದ ವಕೀಲರಾಗಿದ್ದು, ಅವರ ಸಂಬಂಧಿ ಯುವಕನೇ ಕೊಲೆ ಮಾಡಿದ್ದು, ಹೊಸಪೇಟೆ ನಗರದ ಕೋರ್ಟ್ ಆವರಣದಲ್ಲಿಯೇ ಲಾಂಗ್ನಿಂದ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾನೆ.
ಕೋರ್ಟ್ ಆವರಣದಲ್ಲಿ ಈ ದುರ್ಘಟನೆ ನಡೆಯುತ್ತಿದ್ದಂತೆ ಎಲ್ಲಾ ವಕೀಲರು ಭಯದಿಂದ ದಿಕ್ಕಾಪಾಲಾಗಿ ಓಡಿದ್ದು, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಆಸ್ತಿ ವಿವಾದವೇ ವಕೀಲರ ಕೊಲೆಗೆ ಕಾರಣ ಎನ್ನಲಾಗಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.