ವೀರಶೈವ-ಲಿಂಗಾಯತರನ್ನು OBC ಪಟ್ಟಿಗೆ ಸೇರಿಸಿ; ಸಿಎಂ ಬೊಮ್ಮಾಯಿಗೆ ಆಗಸ್ಟ್ 22 ಡೆಡ್ ಲೈನ್!

ವೀರಶೈವ ಸಮಾಜದ ಎಲ್ಲ ಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ (OBC) ಪಟ್ಟಿಗೆ ಸೇರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ. ಬೆಂಗಳೂರಿನಲ್ಲಿ ಮಾತನಾಡಿದ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಎನ್.ತಿಪ್ಪಣ್ಣ, ‘ವೀರಶೈವ-ಲಿಂಗಾಯತ…

basavaraj-bommai-vijayaprabha

ವೀರಶೈವ ಸಮಾಜದ ಎಲ್ಲ ಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ (OBC) ಪಟ್ಟಿಗೆ ಸೇರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಎನ್.ತಿಪ್ಪಣ್ಣ, ‘ವೀರಶೈವ-ಲಿಂಗಾಯತ ಸಮುದಾಯ 60 ವರ್ಷಗಳಿಂದ ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದೆ‌. ಆದರೆ, ಕೇಂದ್ರದ OBC ಪಟ್ಟಿಗೆ ಸೇರಿಸಿಲ್ಲ. ಈ ಸಂಬಂಧ ಆಗಸ್ಟ್ 1ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಸಭೆ ನಡೆಸಿ, ಸಿಎಂಗೆ ಮನವಿ ಸಲ್ಲಿಸಲಾಗುವುದು’ ಎಂದಿದ್ದಾರೆ.

CM ಬೊಮ್ಮಾಯಿಗೆ ಆಗಸ್ಟ್ 22 ಡೆಡ್ ಲೈನ್

Vijayaprabha Mobile App free

ಇನ್ನು,  ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಆಗಸ್ಟ್‌ 22ರ ಒಳಗೆ 2(ಎ) ಮೀಸಲಾತಿ ಕಲ್ಪಿಸಬೇಕು, ಇಲ್ಲದಿದ್ದರೆ ಆಗಸ್ಟ್‌ 23ರಂದು ಶಿಗ್ಗಾವಿಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಪಂಚ ಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಎಚ್ಚರಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ರ‍್ಯಾಲಿ ವೇಳೆ ವಿಜಯಾನಂದ ಕಾಶಪ್ಪನವರ ಮಾತನಾಡಿ, ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಿದರೆ ಮುಖ್ಯಮಂತ್ರಿಗೆ ಸನ್ಮಾನ ಮಾಡಲಾಗುವುದು. ಇಲ್ಲದಿದ್ದರೆ ಅವಮಾನ ಮಾಡಲೂ ಹಿಂಜರಿಯುವುದಿಲ್ಲ,’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.