ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿವೆ.
ಹೌದು, ಸರ್ಕಾರ ಹಾಗೂ ಸಾರಿಗೆ ಇಲಾಖೆ Rapido, OLA ಮತ್ತು Uber ಗಳಿಗೆ ಬೈಕ್ ಮೂಲಕ ಪ್ರಯಾಣಿಕರನ್ನು ಕರೆದೊಯ್ಯಲು ಅನುಮತಿ ನೀಡಿದ್ದನ್ನು ವಿರೋಧಿಸಿ ರಾಜ್ಯದ ಆಟೋ ಸಂಘಟನೆಗಳು ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿದ್ದು, ನಾಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ಸರ್ಕಾರದ ಈ ಕ್ರಮದಿಂದ ಆಟೋ ಚಾಲಕರಿಗೆ ಸಾಕಷ್ಟು ತೊಂದರೆ ಹಾಗೂ ನಷ್ಟ ಉಂಟಾಗುತ್ತಿದೆ. ಆಟೋ ಚಾಲಕರ ಹೊಟ್ಟೆಪಾಡಿಗೆ ಸರ್ಕಾರದ ನೀತಿ ನಿಯಮಗಳು ಅಡ್ಡವಾಗಿರುವುದರಿಂದ ಹೊಸ ನೀತಿಯನ್ನು ರದ್ದುಪಡಿಸಬೇಕೆಂದು ಆಟೋ ಸಂಘಟನೆಗಳು ಈ ನಿರ್ಧಾರ ಮಾಡಿವೆ. ಆದ್ದರಿಂದ ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿಯವರೆಗೆ ಆಟೋ ಸಂಚಾರ ಸಂಪೂರ್ಣ ಬಂದ್ ಆಗಲಿದೆ.
ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?